ನಾಳೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ 26ನೇ ಘಟಿಕೋತ್ಸವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ
Bangalore Reports Bangalore Reports
2.62K subscribers
79 views
0

 Published On Feb 26, 2024

ನಾಳೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ 26ನೇ ಘಟಿಕೋತ್ಸವ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 26ನೇ ವಾರ್ಷಿಕ ಘಟಕೋತ್ಸವವು ನಿಮ್ಹಾನ್ಸ್ ಕನ್ವೆನ್ನನ್ ಸೆಂಟರ್ ನಲ್ಲಿ ನಡೆಯಲಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಗೌರವಾನ್ವಿತ ಥಾವರ್‌ಚಂದ್ ಗೆಹೋಟ್ ರವರು ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಗೌರವಾನ್ವಿತ ಡಾ.ಬಿ.ಎನ್.ಗಂಗಾಧರ್, ಅಧ್ಯಕ್ಷರು, ರಾಷ್ಟ್ರೀಯ ವೈದ್ಯಕೀಯ ಆಯೋಗ, ನವದೆಹಲಿ, ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ) ಘಟಕೋತ್ಸವ ಭಾಷಣ ಮಾಡಲಿದ್ದಾರೆ. ಸಚಿವರು, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ, ಕರ್ನಾಟಕ ಸರ್ಕಾರ ಹಾಗೂ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಆದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ರವರು ಉಪಸ್ಥಿತರಿರುವರು.

ಡಾ.ಜಿ. ಕೆ. ವೆಂಕಟೇಶ್, ಡಾ.ಪಿ. ಎಂ. ಬಿರಾದಾರ್ ಮತ್ತು ಡಾ.ಪಿಂಕಿ ಭಾಟಿಯಾ ಟೋಪಿವಾಲಾ ಇವರುಗಳಿಗೆ 26ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪದವಿ "ಡಾಕ್ಟರ್ ಆಫ್ ಸೈನ್ಸ್" ಪ್ರದಾನ ಮಾಡಲಾಗುವುದು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 26ನೇ ವಾರ್ಷಿಕ ಘಟಿಕೋತ್ಸವದಲ್ಲಿ. ವಿವಿಧ ವಿಷಯಗಳಲ್ಲಿ 52,650 ಅಭ್ಯರ್ಥಿಗಳು ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಅವರ ಪೈಕಿ 17 ಪಿ.ಹೆಚ್.ಡಿ. 156 ಸೂಪರ್ ಸ್ಪೆಷಾಲಿಟಿ, 7,815 ಸ್ನಾತಕೋತ್ತರ
ಪದವಿ, 07 ಸ್ನಾತಕೋತ್ತರ ಡಿಪ್ಲೊಮಾ ಪದವಿ. 122 ಫೆಲೋಷಿಪ್ ಕೋರ್ಸ್, 08 ಸರ್ಟಿಫಿಕೇಟ್ ಕೋರ್ಸ್ ಹಾಗೂ 44,525 ಸ್ನಾತಕ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ವಿಶ್ವವಿದ್ಯಾಲಯದ ಎಲ್ಲಾ ನಿಖಾಯಗಳ ಒಟ್ಟು ವಿದ್ಯಾರ್ಥಿಗಳ ಒಟ್ಟಾರೆ ಫಲಿತಾಂಶ ಪ್ರತಿಶತ 82.43% ಆಗಿರುತ್ತದೆ.

show more

Share/Embed